ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
2ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
5ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ