೨ ಕೊರಿಂಥದವರಿಗೆ 10:10

ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 10

8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.

9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.

10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.

11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.

12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.

೨ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी