ಅಪೊಸ್ತಲರ ಕೃತ್ಯಗಳು 22:25

ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 22

23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ

24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

26ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.

27ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.

ಅಪೊಸ್ತಲರ ಕೃತ್ಯಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी