ಯೆರೆಮಿಯ 23:19

ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?

19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.

21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी