ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ