ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
26ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
28ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ