ಅಪೊಸ್ತಲರ ಕೃತ್ಯಗಳು 9:5

ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.

4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.

5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.

6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी