ಯಾಜಕಕಾಂಡ 23:8

ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.

7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

8ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--

10ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी