ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ