೨ ಸಮುವೇಲನು 5:22

ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 5

20ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.

೨ ಸಮುವೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी