ಯೆಹೆಜ್ಕೇಲನು 30:14

ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 30

12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.

14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.

15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.

16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.

ಯೆಹೆಜ್ಕೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी