ಯೆಶಾಯ 37:11

ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?

ಸಂದರ್ಭದೊಂದಿಗೆ ಓದಿ · ಯೆಶಾಯ 37

9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--

10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;

11ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?

12ನನ್ನ ಪಿತೃಗಳು ಗೋಜಾನ್‌, ಖಾರಾನ್‌, ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?

13ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी