ಯೆಹೆಜ್ಕೇಲನು 32:28

ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.

27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.

28ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.

29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.

30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी