ಯೆಹೋಶುವ 10:26

ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 10

24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.

25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.

26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.

27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.

28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.

ಯೆಹೋಶುವ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी