ಆಮೋಸ 4:6

ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

ಸಂದರ್ಭದೊಂದಿಗೆ ಓದಿ · ಆಮೋಸ 4

4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.

5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.

6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.

8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी