ಧರ್ಮೋಪದೇಶಕಾಂಡ 13:5

ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 13

3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.

4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.

5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.

6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು

7ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ

ಧರ್ಮೋಪದೇಶಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी