ಯೆಶಾಯ 31:1

ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 31

1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

2ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಯೆಶಾಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी