ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
2ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ