ರೋಮಾಪುರದವರಿಗೆ 7:6

ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 7

4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

5ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.

8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

ರೋಮಾಪುರದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी