ಆದಿಕಾಂಡ 15:12

ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 15

10ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.

11ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.

12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.

13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.

14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

ಆದಿಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी