ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ