ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
1ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
2ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
3ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
5ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ