೧ ಅರಸುಗಳು 8:38

ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.

37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು

39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,

40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी