ನ್ಯಾಯಸ್ಥಾಪಕರು 10:14

ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 10

12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.

13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.

14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.

16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

ನ್ಯಾಯಸ್ಥಾಪಕರು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी