೨ ಪೂರ್ವಕಾಲವೃತ್ತಾಂತ 34:5

ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.

4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ

5ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.

6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.

7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್‌ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी