ಯೆರೆಮಿಯ 23:15

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.

14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.

15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.

17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी