ಜೆಕರ್ಯ 14:12

ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

ಸಂದರ್ಭದೊಂದಿಗೆ ಓದಿ · ಜೆಕರ್ಯ 14

10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.

12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.

14ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.

ಜೆಕರ್ಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी