ರೋಮಾಪುರದವರಿಗೆ 16:19

ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 16

17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ರೋಮಾಪುರದವರಿಗೆ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी