೧ ಯೋಹಾನನು 3:10

ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.

9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.

10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.

11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.

12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी