ಮಾರ್ಕನು 7:35

ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 7

33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी