ಯೆಹೋಶುವ 21:5

ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.

ಸಂದರ್ಭದೊಂದಿಗೆ ಓದಿ · ಯೆಹೋಶುವ 21

3ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--

4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.

5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.

6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.

7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

ಯೆಹೋಶುವ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी