ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
17ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
18ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
20ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ