ಯಾಜಕಕಾಂಡ 8:23

ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 8

21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.

22ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

23ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.

24ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.

ಯಾಜಕಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी