ಯೆಶಾಯ 55:6

ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 55

4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.

5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

ಯೆಶಾಯ 55 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी