ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
13ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
15ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ