ಯೆರೆಮಿಯ 51:58

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.

57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.

59ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.

60ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी