ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
13ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
14ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
15ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ