ಯೋಹಾನನು 14:7

ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 14

5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.

6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.

9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?

ಯೋಹಾನನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी