ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ