೨ ಸಮುವೇಲನು 15:26

ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.

25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.

27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.

28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी