ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ