ಅಪೊಸ್ತಲರ ಕೃತ್ಯಗಳು 18:17

ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 18

15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

16ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.

17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.

ಅಪೊಸ್ತಲರ ಕೃತ್ಯಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी