ಯೆಶಾಯ 23:17

ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 23

15ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.

16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).

17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.

18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.

ಯೆಶಾಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी