ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
25ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ