ಯಾಜಕಕಾಂಡ 20:20

ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.

19ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.

20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.

22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी