ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
9ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
10ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
12ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ