ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
12ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ