ಯೆಹೆಜ್ಕೇಲನು 37:23

ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 37

21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.

22ನಾನು ಅವರನ್ನು ಇಸ್ರಾಯೇಲ್‌ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.

23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.

24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.

25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.

ಯೆಹೆಜ್ಕೇಲನು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी