ಅರಣ್ಯಕಾಂಡ 17:9

ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 17

7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.

10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.

11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.

ಅರಣ್ಯಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी