ಆದಿಕಾಂಡ 2:4

ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 2

2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.

3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.

4ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.

5ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.

6ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.

ಆದಿಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी